Wed. Nov 20th, 2024

Bantwala: ದ.ಕ ಜಿಲ್ಲೆಯ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ಜಿಲ್ಲಾಡಳಿತ ದಾಳಿ – 23 ಬೋಟುಗಳು ವಶ!

ಬಂಟ್ವಾಳ :(ಅ.5) ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದಂತೆ ಬಂಟ್ವಾಳ ತಾಲೂಕಿನ ತುಂಬೆ, ಮಾರಿಪಳ್ಳ ಭಾಗದ ನೇತ್ರಾವತಿ ನದಿಯಲ್ಲಿ ಬೋಟ್(ಬೃಹತ್ ದೋಣಿ) ಮೂಲಕ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ದ.ಕ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು,

ಇದನ್ನೂ ಓದಿ; 🔶ಮಂಗಳೂರು: ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ – ಕಿಶೋರ್ ಕುಮಾರ್

ಒಟ್ಟು 23 ಬೋಟ್‌ಗಳನ್ನು ವಶಪಡಿಸಿಕೊಂಡಿದ್ದು, ಅಧಿಕಾರಿಗಳ ದಾಳಿಯ ವೇಳೆ ಮರಳುಗಾರಿಕೆ ನಡೆಸುತ್ತಿದ್ದ ಕಾರ್ಮಿಕರು ತಪ್ಪಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ವಶಪಡಿಸಿಕೊಂಡ ದೋಣಿಗಳನ್ನು 4ರಂತೆ ಜೋಡಿಸಿಕೊಂಡು 5 ತಂಡಗಳ ಮೂಲಕ ನದಿಯಲ್ಲೇ ಮಂಗಳೂರಿನ ಅಡ್ಯಾರ್‌ವರೆಗೆ ಸಾಗಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.


ಬೋಟ್‌ಗಳಲ್ಲಿ ಯಾವುದೇ ರೀತಿಯ ಮರಳು ಪತ್ತೆಯಾಗಿಲ್ಲ. ಮರಳುಗಾರಿಕೆಯಲ್ಲಿ ತೊಡಗಿದ್ದವರು ಯಾರು, ಬೋಟ್‌ಗಳು ಯಾರಿಗೆ ಸಂಬಂಧಪಟ್ಟಿವೆ ಎಂಬುದರ ಕುರಿತು ಅಧಿಕಾರಿಗಳ ತನಿಖೆಯ ಬಳಿಕ ತಿಳಿದುಬರಬೇಕಿದೆ.


ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಡಿ. ಭಟ್, ಮಂಗಳೂರು ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಹಿರಿಯ ಭೂ ವಿಜ್ಞಾನಿ ಗಿರೀಶ್‌ಮೋಹನ್, ಭೂ ವಿಜ್ಞಾನಿ ಮಹಾದೇಶ್ವರ, ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ದನ್ ಜೆ., ಗ್ರಾಮಕರಣಿಕರು, ಕಂದಾಯ ಇಲಾಖೆ ಸಿಬಂದಿ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Bantwala: The district administration raided the illegal sand mining road in DK district – 23 boats seized!

Leave a Reply

Your email address will not be published. Required fields are marked *