ಮೇಷ ರಾಶಿ :ನಿಮ್ಮ ವೇಗದ ಮಾತು ಇತರರಿಗೆ ಅರ್ಥವಾಗದೇ ಇರಬಹುದು. ಸುಕೃತವು ನಿಮ್ಮ ಪಾಲಿಗೆ ಅನುಕೂಲತೆಯನ್ನು ಒದಗಿಸಿಕೊಟ್ಟೀತು. ಸಹೋದ್ಯೋಗಿಗಳಿಂದ ನೀವು ಕಛೇರಿಯಲ್ಲಿ ಸಹಾಯ ಪಡೆಯುವ ಸಾಧ್ಯತೆ ಇದೆ.
ವೃಷಭ ರಾಶಿ :ಒತ್ತಡ ಮಾಡಿಕೊಂಡು ಕಾರ್ಯವನ್ನು ಮಾಡುವುದು ಬೇಡ. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸಕ್ಕೆ ಕಷ್ಟಪಡುವರು. ಬಂಧುಗಳು ನಿಮ್ಮನ್ನು ನಿರ್ಲಕ್ಷ್ಯ ಮಾಡಬಹುದು.
ಮಿಥುನ ರಾಶಿ :ಅನ್ಯರಿಂದ ಅಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ನೀವು ಧೈರ್ಯವನ್ನು ಬಿಡಲಾರಿರಿ. ವೃತ್ತಿಜೀವನದಲ್ಲಿ ಕೆಲವು ದೊಡ್ಡ ಬದಲಾವಣೆಗಳು ನಿಮ್ಮ ಪರವಾಗಿರಲಿದೆ. ಎಷ್ಟೋ ವರ್ಷದ ಸಾಲವು ಇಂದು ಮುಕ್ತಾಯವಾಗಲಿದೆ.
ಕಟಕ ರಾಶಿ :ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುವ ಅವಶ್ಯಕತೆ ಇಲ್ಲ. ಸಾಮಾಜಿಕವಾಗಿ ಯಾವುದೇ ಕೆಲಸವನ್ನು ಮಾಡಲು ಅದರ ಬಗ್ಗೆ ಮಾಹಿತಿ ತಿಳಿದಿರಲಿ. ಸ್ವಂತ ಉದ್ಯಮದಲ್ಲಿ ಹೆಚ್ಚು ಪರಿಶ್ರಮ ಇರಬೇಕಾಗಿ ಬರಬಹುದು.
ಸಿಂಹ ರಾಶಿ :ಕಾರ್ಯದ ಸ್ಥಳದಲ್ಲಿ ಪ್ರತಿಯೊಬ್ಬರೂ ನಿಮ್ಮ ಕೆಲಸವನ್ನು ಪ್ರಶಂಸಿಸುವರು. ಇಂದು ನಿಮ್ಮ ಸಮಯ ವ್ಯರ್ಥವಾಗಿ ಸುಮ್ಮನೇ ಅಲೆದಾಡಬಹುದು. ಸಾಲ ಮಾಡಬೇಕಾದ ಸ್ಥಿತಿಯು ಬರಬಹುದು.
ಕನ್ಯಾ ರಾಶಿ :ನಿಮ್ಮ ಸಂಕಷ್ಟಕ್ಕೆ ಯಾರನ್ನೋ ದೂರುತ್ತ ಇರುವುದು ಸರಿಯಲ್ಲ. ನಿಮ್ಮ ಹಣೆಯಲ್ಲಿ ಬರೆದಿದ್ದರೆ ಅದು ಆಗುತ್ತದೆ ಎಂಬ ವಿಶ್ವಾಸವಿರಲಿ. ಉದ್ಯೋಗಸ್ಥರಿಗೆ ಆತುರ ಮತ್ತು ಅತಿಯಾದ ಆತ್ಮವಿಶ್ವಾಸ ಎರಡೂ ನಿಮಗೆ ಅಪಾಯಕಾರಿ.
ತುಲಾ ರಾಶಿ :ಇಂದು ಮೇಲಧಿಕಾರಿಗಳಿಂದ ಹಲವು ರೀತಿಯ ಒತ್ತಡವನ್ನು ನೀವು ಅನುಭವಿಸುವಿರಿ. ಸ್ಥಿರಾಸ್ತಿಯಿಂದ ನಿಮಗೆ ಸಾಲವು ದೊರೆಯಬಹುದು. ಮಿತ್ರರ ಜೊತೆ ಮಾಡಿದ ವಿವಾದವು ಮನಸ್ತಾಪವನ್ನು ಕೊಟ್ಟೀತು. ಕುಟುಂಬದಲ್ಲಿ ಸಂತೋಷ ಮತ್ತು ಶಾಂತಿಯು ಇರಲಿದೆ.
ವೃಶ್ಚಿಕ ರಾಶಿ :ನಿಮ್ಮ ಕಠಿಣ ಪರಿಶ್ರಮವು ಕೆಲಸಕ್ಕೆ ಬಾರದು. ಯುಕ್ತಿಯಿಂದ ನಿರ್ವಹಿಸುವ ಚಾಣಾಕ್ಷತೆ ಬೇಕು. ಕೆಲಸದ ಸ್ಥಳದಲ್ಲಿ ಕೆಲವು ಬದಲಾವಣೆಗಳು ನಿಮ್ಮ ಇಂದಿನ ಕೆಲಸವನ್ನು ನಿಧಾನಗೊಳಿಸಬಹುದು. ಪ್ರಯಾಣಕ್ಕೆ ಸಂಬಂಧಿಸದಂತೆ ತೊಂದರೆ ಬರಬಹುದು.
ಧನು ರಾಶಿ :ಇಂದು ನಿಮ್ಮ ಮನೆಯ ದುರಸ್ತಿಯ ಕಡೆ ಯೋಚಿಸುಬಿರಿ. ವಾಹನದ ವ್ಯಾಪಾರಿಗಳು ಪ್ರಗತಿ ಕಾಣುವುದು. ಕೆಲಸದ ಸ್ಥಳದಲ್ಲಿ ಕೆಲವು ಉತ್ತಮ ಅವಕಾಶಗಳು ಲಭಿಸುತ್ತವೆ. ಉದ್ಯೋಗಕ್ಕೆ ಸಂಬಂಧಿಸಿದಂತೆ ಕುಟುಂಬದವರ ಸಹಕಾರ ಇರಲಿದೆ.
ಮಕರ ರಾಶಿ :ನಿಮ್ಮ ಪ್ರಮುಖ ದಾಖಲೆಗಳನ್ನು ಯಾರಿಗೂ ಹಸ್ತಾಂತರಿಸುವುದು ಬೇಡ. ಉದ್ಯಮಿಗಳು ಕಾನೂನು ತೊಡಕಿಗೆ ನೇರವಾಗಿ ಪ್ರವೇಶಿಸಿ ಸರಿ ಮಾಡಿಕೊಳ್ಳುವರು. ಕಲಾವಿದರಿಗೆ ಅವಕಾಶಗಳು ಸಿಗಲಿದೆ. ಕೆಲಸವನ್ನು ಬದಲಾಯಿಸುವಿರಿ. ನಿಮ್ಮ ಸ್ನೇಹಿತರಿಗೆ ನಿಮ್ಮಿಂದ ಹೆಚ್ಚಿನ ಸಲಹೆ ಕೊಡುವಿರಿ.
ಕುಂಭ ರಾಶಿ :ಇಂದು ಯಾವುದನ್ನೂ ಅತಿಯಾಗಿ ಹಚ್ಚಿಕೊಳ್ಳದೇ ಕಾರ್ಯತತ್ಪರರಾಗುವಿರಿ. ನಿಮ್ಮ ಕೆಲವು ಆಸೆಗಳನ್ನು ಈಡೇರಿಸಲು ದಾರಿ ಮಾಡಿಕೊಳ್ಳುವಿರಿ. ವ್ಯಾಪಾರದಲ್ಲಿ ಲಾಭಗಳಿಸಲು ಹೊಸ ಅವಕಾಶಗಳು ಕಾಣಿಸಿಕೊಂಡೀತು.
ಮೀನ ರಾಶಿ :ನೀವು ಉದ್ಯಮಿಗಳ ಜೊತೆ ಹೊಸ ಯೋಜನೆಯನ್ನು ಪಡೆಯುವ ತವಕದಲ್ಲಿ ಇರುವಿರಿ. ದೈಹಿಕ ವಿಶ್ರಾಂತಿಯ ಜೊತೆ ಮಾನಸಿಕ ದೃಢತೆಯೂ ಅಗತ್ಯವಾಗಿ ಹೆಚ್ಚಿಸಿಕೊಳ್ಳಬೇಕು. ಹೊಸ ಕೆಲಸವನ್ನು ಮಾಡಲು ಬಯಸಿದರೆ ಸಮಯವು ನಿಮಗೆ ಉತ್ತಮವಾಗಿರುತ್ತದೆ.