Wed. Nov 20th, 2024

Gundya: ಮಗನ ಬರ್ತ್ ಡೇ ಪಾರ್ಟಿಗಾಗಿ ಕಡವೆ ಹತ್ಯೆ- ಕೋವಿ ಸಹಿತ ಫ್ರಿಡ್ಜ್‌ ನಲ್ಲಿದ್ದ ಮಾಂಸ ವಶಕ್ಕೆ!! ಪೋಲಿಸರಿಗೆ ಹೆದರಿ ಆರೋಪಿಗಳು ಪರಾರಿ!!

ಗುಂಡ್ಯ:(ಅ.19) ಮಗನ ಹುಟ್ಟು ಹಬ್ಬಕ್ಕಾಗಿ ಕಡವೆಯನ್ನು ಗುಂಡಿಕ್ಕಿ ಕೊಂದ ಮಾಂಸವನ್ನು ಮನೆಯ ಫ್ರಿಡ್ಜ್‌ ನಲ್ಲಿ ದಾಸ್ತಾನು ಇರಿಸಲಾದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಹತ್ಯೆಗೆ ಬಳಸಲಾದ ಕೋವಿ ಮತ್ತು ಕಡವೆ ಮಾಂಸವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ⭕ಬೆಳ್ತಂಗಡಿ : ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋ ವನ್ನು ರಕ್ಷಿಸಿದ ಮದ್ದಡ್ಕದ‌ ಬಜರಂಗದಳ‌ ಕಾರ್ಯಕರ್ತರು!!

ಶಿರಾಡಿ ಗ್ರಾಮದ ಗುಂಡ್ಯ ನಿವಾಸಿ ಸುರೇಶ್ ಮತ್ತವರ ಸಹವರ್ತಿಗಳು ರಕ್ಷಿತಾರಣ್ಯದಲ್ಲಿದ್ದ ಕಡವೆಯೊಂದಕ್ಕೆ ಗುಂಡಿಕ್ಕಿ ಹತ್ಯೆಗೈದಿದ್ದರು. ಅದನ್ನು ಮಗನ ಹುಟ್ಟು ಹಬ್ಬದ ಔತಣ ಕೂಟಕ್ಕೆಂದು ಮಾಂಸ ಮಾಡಿ ಮನೆಯ ಪ್ರೀಝರ್‌ನಲ್ಲಿ ಇರಿಸಿದ್ದರು.


ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಉಪ ವಲಯ ಅರಣ್ಯಾಧಿಕಾರಿ ಯತೀಂದ್ರ, ಇಲಾಖಾ ಸಿಬ್ಬಂದಿ ಸುನಿಲ್, ಶಿವಾನಂದ ಅವರ ತಂಡ ಸುರೇಶ್ ಮನೆಗೆ ದಾಳಿ ನಡೆಸಿ ಸಂಗ್ರಹಿಸಿಟ್ಟ ಮಾಂಸ ಹಾಗೂ ಹತ್ಯೆಗೆ ಬಳಸಲಾದ ಕೋವಿಯನ್ನು ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಕಾರ್ಯಾಚರಣೆ ವೇಳೆ ಆರೋಪಿಗಳು ಗುಂಡ್ಯ ಹೊಳೆಯನ್ನು ಈಜಿ ದಾಟುವ ಮೂಲಕ ಪರಾರಿಯಾಗಿದ್ದಾರೆ. ವಲಯಾಧಿಕಾರಿಯಿಂದ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *