Wed. Nov 20th, 2024

Belal: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಿಂದ “ಯುವಸಿರಿ” – 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ನೇಜಿನಾಟಿ – ವಿಶೇಷ ಕಾರ್ಯಕ್ರಮ – ಗದ್ದೆಗೆ ಹಾಲು ಸಮರ್ಪಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸೋನಿಯಾ ಯಶೋವರ್ಮ

ಬೆಳಾಲು :(ಅ.20) ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ನೇತೃತ್ವದಲ್ಲಿ ಶ್ರೀ ಧ. ಮಂ. ಕಾಲೇಜು ರಾಷ್ಟ್ರೀಯ ಯೋಜನಾ ಘಟಕಗಳು, ಉಜಿರೆ ಶ್ರೀ ಧ. ಮಂ. ಸ್ಪೋರ್ಟ್ಸ್ ಕ್ಲಬ್, ಬೆಳ್ತಂಗಡಿ ರೋಟರಿ ಕ್ಲಬ್, ತಾಲೂಕು ಪತ್ರಕರ್ತರ ಸಂಘ,

ಇದನ್ನೂ ಓದಿ: ⭕ತೊಕ್ಕೊಟ್ಟು: ರೈಲ್ವೇ ಹಳಿಯಲ್ಲಿ ಕಲ್ಲಿಟ್ಟ ಆಗಂತುಕರು

ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಸಹಯೋಗದಲ್ಲಿ ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಸಮೀಪದ ಗದ್ದೆಯಲ್ಲಿ ಯುವ ಸಿರಿ, ರೈತ ಭಾರತದ ಐಸಿರಿ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ನೇಜಿನಾಟಿ ಕಾರ್ಯಕ್ರಮ ಅ.20ರಂದು ನಡೆಯಿತು.

ಕಾರ್ಯಕ್ರಮವನ್ನು ಸೋನಿಯಾ ಯಶೋವರ್ಮ ಉದ್ಘಾಟಿಸಿದರು. ಉಜಿರೆ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಉಜಿರೆ ಶ್ರೀ ಧ. ಮಂ. ಕಾಲೇಜು ಪ್ರಾಂಶುಪಾಲರಾದ ಡಾ. ಬಿ. ಎ.ಕುಮಾರ ಹೆಗ್ಡೆ, ಧರ್ಮಸ್ಥಳ ಕೃಷಿ ವಿಭಾಗದ ಮುಖ್ಯಸ್ಥ ಬಿ. ಬಾಲಕೃಷ್ಣ ಪೂಜಾರಿ,

ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಬಿ. ಕೆ. ಧನಂಜಯ ರಾವ್, ಅನಂತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್,

ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಉಜಿರೆ ಶ್ರೀ ಧ. ಮಂ. ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕ ರವೀಶ್ ಪಡುಮಲೆ,

ಅನಂತೋಡಿ ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ ಗೌಡ, ಶ್ರೀ ಧ. ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ರಾಜೇಶ್ ಪೈ, ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *