Wed. Nov 20th, 2024

Moodbidire: ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ, ಭುಗಿಲೆದ್ದ ಆಕ್ರೋಶ – ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಒತ್ತಾಯ!!

ಮೂಡುಬಿದಿರೆ:(ಅ.23) ಬಿಲ್ಲವ ಮಹಿಳೆಯರನ್ನು ಅವಮಾನಿಸಿ ಕುಣಿತ ಭಜನೆ ಮಾಡುವ ಹೆಣ್ಣು ಮಕ್ಕಳ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದ ಪುತ್ತೂರು ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಭಜನೆಯ ಕಾರ್ಯಕರ್ತರಿಂದ ಪ್ರತಿಭಟನಾ ರೂಪವಾಗಿ ದೂರನ್ನು ನೀಡಲಾಯಿತು.

ಇದನ್ನೂ ಓದಿ: Aries to Pisces: ಮಿಥುನ ರಾಶಿಯವರಿಗೆ ಸಹೋದ್ಯೋಗಿಗಳ ಸಹಕಾರ ಸಿಗುವುದು!!

ಕುಣಿತ ಭಜನೆಯಲ್ಲಿ ಅಪ್ರಾಪ್ತ ವಯಸ್ಸಿನ ನೂರಾರು ಬಾಲಕ ಬಾಲಕಿಯರು ಭಜನಾ ಸೇವೆ ಮಾಡುತ್ತಿದ್ದು, ಈ ಬಗ್ಗೆ ಸಂಜೀವ ಕಾಣಿಯೂರು ಎಂಬ ವ್ಯಕ್ತಿ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲವಾಗಿ ಮಾತನಾಡಿ ಲೈಂಗಿಕ ದೌರ್ಜನ್ಯ ಆರೋಪವನ್ನು ಮಾಡಿ ಇದರಿಂದಾಗಿ ಸಮಾಜದಲ್ಲಿ ತಲೆ ಎತ್ತಿ ನಡೆಯದಂತೆ , ಹಾಗೂ ಸಮಾಜ ಸಂಶಯದ ದೃಷ್ಟಿಯಲ್ಲಿ ನೋಡುವ ಹಾಗೆ ಮಾಡಿರುತ್ತಾನೆ‌.

ಆದ್ದರಿಂದ ಇಡೀ ಮೂಡುಬಿದಿರೆ ತಾಲೂಕಿನಾದ್ಯಾಂತ ನೂರಾರು ಬಾಲಕಿಯರ ಬೇರೆ ಬೇರೆ ಭಜನಾ ತಂಡಗಳಿದ್ದು, ಆರೋಪಿಯ ಮಾನಹಾನಿ ಹೇಳಿಕೆಯನ್ನು ನೀಡಿ ಗೌರವಕ್ಕೆ ಚ್ಯುತಿ ತರುವ ಕೆಲಸವನ್ನು ಮಾಡಿರುತ್ತಾನೆ. ಆದ್ದರಿಂದ ಪೊಲೀಸ್ ಇಲಾಖೆಯು ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಇನ್ನೂರಕ್ಕಿಂತಲೂ ಅಧಿಕ ಕುಣಿತ ಭಜನೆಯ ಮಕ್ಕಳು ಹಾಗೂ ಮಹಿಳೆಯರು ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ನೋವನ್ನು ವ್ಯಕ್ತಪಡಿಸಿ ವಿವಿಧ ಕುಣಿತ ಭಜನಾ ಮಂಡಳಿಯ ಬಾಲಕಿಯರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಿದ್ದಪ್ಪ ನರನೂರು ಇವರಿಗೆ ದೂರು ಸಲ್ಲಿಸಿ ಆದಷ್ಟು ಬೇಗ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಮೂಡುಬಿದಿರೆ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ಲಕ್ಷ್ಮಣ್ ಸುವರ್ಣ ಮಾತನಾಡಿ, ಮಹಿಳೆಯರ ಬಗ್ಗೆ ಮತ್ತು ಕುಣಿತ ಭಜನೆ ಮಾಡುವ ಮಕ್ಕಳ ಬಗ್ಗೆ ನಿಂದನಾತ್ಮಕವಾಗಿ ಮಾತನಾಡಿದ ಅರಣ್ಯ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಆತನ ಮಾತುಗಳಿಂದ ಸಂಸ್ಕೃತಭರಿತವಾದ ಭಜನೆಯ ಭಜಕರಿಗೆ ನೋವಾಗಿದೆ. ಇದು ಹಿಂದೂ ಸಮಾಜಕ್ಕೆ ಆದ ನೋವು. ಭಜನೆ ಎನ್ನುವುದು ಭಗವಂತನನ್ನು ಒಲಿಸುವ ಸನ್ಮಾರ್ಗವಾಗಿದೆ ಇಂತಹ ಮಾತುಗಳಿಂದ ಮುಂದಿನ ದಿನಗಳಲ್ಲಿ ಅಶಾಂತಿ ನಿರ್ಮಿಸುವ ಹುನ್ನಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಸುಚೇತನ್ ಜೈನ್, ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ಸಮಿತ್ ರಾಜ್ ದರಗುಡ್ಡೆ, ಬಜರಂಗದಳ ಸಂಘಟನೆಯ ಮುಖಂಡರಾದ ಪ್ರವೀಣ್ ಬೋರಗುಡ್ಡೆ, ಅವಿನಾಶ್, ಕುಣಿತ ಭಜನೆಯ ತರಬೇತುದಾರರಾದ ಅಶೋಕ್ ನಾಯಕ್, ವಿಜಯ್ ನೀರ್ಕೆರೆ, ಲಕ್ಷ್ಮಣ್‌ನಾಯ್ಕ್, ಅಕ್ಷಯ್ ಸಾವ್ಯ, ಹಾಗೂ ಭಜನಾ ಪರಿಷತ್ತಿನ ವಲಯಾಧ್ಯಕ್ಷರುಗಳು ಸಹಿತ ಅಸಂಖ್ಯ ಭಜನಾ ಕಾರ್ಯಕರ್ತರು ಹಿಂದೂ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *