ಪುತ್ತೂರು:(ಅ.24) ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು.
ಇದನ್ನೂ ಓದಿ: 🟣ಬೈಂದೂರು: ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ
ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ ಉಪಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಅವರು ಜಯಗಳಿಸಿದ್ದಾರೆ.
1693 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಎಂ.ಎ. ಸ್ನಾತಕೋತ್ತರ ಪದವೀಧರ ಕಿಶೋರ್., ವಿದ್ಯಾರ್ಥಿ ದೆಸೆಯಿಂದ ಸಂಘ ಪರಿವಾರದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ವಿದ್ಯಾರ್ಥಿ ಜೀವನದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ನಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು.