ಮಂಗಳೂರು :(ಅ.24) ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 4ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ಸಂಭವಿಸಿದೆ.
ಇದನ್ನೂ ಓದಿ: 🛑ಪುತ್ತೂರು: ವಿಧಾನ ಪರಿಷತ್ ಉಪಚುನಾವಣೆ
ಬಡಕಬೈಲು ನಿವಾಸಿ ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11 ) ಮೃತ ವಿದ್ಯಾರ್ಥಿನಿ.
ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆ ತರುವ ಆಟೋ ರಿಕ್ಷಾಗೆ ಕಲ್ಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ದಿಂದ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ.
ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಯಿಷಾ ವಹಿಬಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.
ರಿಕ್ಷಾದಲ್ಲಿದ್ದ ಇತರ ಮೂವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.