ಉಡುಪಿ :(ಜು.12) ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತೆಯನ್ನು ಉಪ್ಪಿನಂಗಡಿ ಮೂಲದ ಶಫೀರಾ (21) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:https://uplustv.com/2024/07/12/subramanya-ನಾಗರ-ಹಾವಿನ-ಮರಿಯನ್ನು-ರಕ್ಷಿಸಿದ-ಸ್ನೇಕ್-ಮಾಧವ/
ಬಂಧಿತೆಯು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಬಂಧಿತೆ ಶಫೀರಾ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಈ ಗರುಡ ಗ್ಯಾಂಗ್ನ ಸದಸ್ಯರು ಕೆಲ ದಿನಗಳ ಹಿಂದೆ ಉಡುಪಿ-ಮಣಿಪಾಲ ಹೆದ್ದಾರಿಯಲ್ಲಿ ರಸ್ತೆಗಿಳಿದು ಕೊಲೆಗೆ ಯತ್ನಿಸಿದ್ದರು. ನಗರದಲ್ಲಿ ತಡರಾತ್ರಿ ಕತ್ತಿ ಮತ್ತಿತರ ಆಯುಧಗಳೊಂದಿಗೆ ಬೀದಿ ಕಾಳಗ ನಡೆಸಿದ್ದರು.