High Court:(ಅ.28) ರಾಜ್ಯದ ಎಲ್ಲಾ ಅಳಿಯಂದಿರಿಗೆ ಹೈಕೋರ್ಟ್ ತನ್ನ ಮಹತ್ವದ ತೀರ್ಪಿನ ಮೂಲಕ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.
ಇದನ್ನೂ ಓದಿ: ⭕ಪ್ರಿಯಕರನ ಜೊತೆ ಸೇರಿ ಪತಿಗೆ ವಿಷವುಣಿಸಿದ ವಿಷಕನ್ಯೆ
ಹೌದು, ಕೇರಳ ಹೈಕೋರ್ಟಿನ ಪ್ರಕಾರ, ಯಾವುದೇ ಅಳಿಯ ತನ್ನ ಮಾವನ ಆಸ್ತಿಯನ್ನು ಪಡೆದುಕೊಳ್ಳಬಹುದು. ಈ ಕುರಿತು ಹೈಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ.
ಆದರೆ, ಇದರ ಹಿಂದೆ ವಿಶೇಷ ಕಾರಣವಿದೆ. ಮಾವ ತಾನು ಸಂಪಾದಿಸಿದ ಆಸ್ತಿಯಲ್ಲಿ ಒಂದಿಷ್ಟು ಅಥವಾ ಎಲ್ಲವನ್ನು ಅಳಿಯನ ಹೆಸರಿಗೆ ಬರೆದಿದ್ದರೆ ಮಾತ್ರ ಅಳಿಯ ಆಸ್ತಿಗೆ ಹಕ್ಕು ಸಾಧಿಸಬಹುದು.
ಇಷ್ಟು ಮಾತ್ರವಲ್ಲದೆ ಅಳಿಯನು ಮಾವನ ಆಸ್ತಿಯ ಮೇಲೆ ಹಕ್ಕು ಕೇಳುತ್ತಿರುವಾಗ, ಮಾವನ ಮೇಲೆ ಅಳಿಯ ಯಾವುದೇ ರೀತಿ ಒತ್ತಡ ಹಾಕುವಂತಿಲ್ಲ.
ಒಂದು ವೇಳೆ ಒತ್ತಡ ಹಾಕಿ ಇದಕ್ಕೆ ಸಾಕ್ಷಿ ಸಿಕ್ಕರೆ ಅಳಿಯನಿಗೆ ಶಿಕ್ಷೆ ವಿಧಿಸಲು ಕಾನೂನು ಅವಕಾಶವಿದೆ. ಅಂತಹ ಪರಿಸ್ಥಿತಿಯಲ್ಲಿ, ಮಾವ ತನ್ನ ಆಸ್ತಿಯನ್ನು ಮರಳಿ ಪಡೆಯಲು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಕೋರ್ಟ್ ಹೇಳಿದೆ.