ಕೇರಳ:(ಅ.29) ಕೇರಳದ ಕಾಸರಗೋಡಿನ ದೇವಸ್ಥಾನದ ಉತ್ಸವದ ಸಂದರ್ಭದಲ್ಲಿ ಪಟಾಕಿ ಸಿಡಿತ ಮಾಡಲಾಗಿದ್ದು, ಆದರೆ ಈ ಸಂದರ್ಭದಲ್ಲಿ ಬೆಂಕಿ ಹತ್ತಿಕೊಂಡು 150 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ..
ಇದನ್ನೂ ಓದಿ: ⚖Daily horoscope: ವೃಶ್ಚಿಕ ರಾಶಿಯವರಿಗೆ ಪ್ರೀತಿಯು ಬಂಧನದಂತೆ ತೋರಬಹುದು!!!
ಈ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ದೇವಸ್ಥಾನದ ಉತ್ಸವದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಪಟಾಕಿ ಸಿಡಿಸುವ ಸಂದರ್ಭದಲ್ಲಿ 150 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಇದರಲ್ಲಿ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಟಾಕಿ ಸಿಡಿತ ಉಂಟಾದ ವೀರರ್ಕಾವು ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಗಾರಕ್ಕೆ ಬೆಂಕಿ ತಗುಲಿ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಅವಘಡ ನಡೆದ ಸ್ಥಳದಲ್ಲಿ ತೀವ್ರ ಗಾಯಗೊಂಡವರನ್ನು ಕಾಸರಗೋಡು, ಕಣ್ಣೂರು, ಮಂಗಳೂರಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.
ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಮುಖ್ಯಸ್ಥರು ಸೇರಿ ಜಿಲ್ಲಾಡಳಿತದ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ರಕ್ಷಣೆ ಒದಗಿಸುವ ಕೆಲಸ ಮಾಡಿದ್ದಾರೆ.