Wed. Nov 20th, 2024

Bengaluru: ಅರಣ್ಯ ಭೂಮಿಯಲ್ಲಿ ಕೋಟಿ ಮೌಲ್ಯದ ನೂರಾರು ಮರಗಳ ಕಡಿದು ಟಾಕ್ಸಿಕ್ ಸಿನಿಮಾ ಶೂಟಿಂಗ್‌ – ಸ್ಯಾಟ್ ಲೈಟ್ ಚಿತ್ರಗಳಲ್ಲಿ ಅಕ್ರಮ ಬಯಲು..!

ಬೆಂಗಳೂರು :(ಅ.30) ಟಾಕ್ಸಿಕ್‌ ಸಿನಿಮಾ ಚಿತ್ರೀಕರಣದ ವೇಳೆ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾಕಿರುವ ಕೃತ್ಯವು ಸ್ಯಾಟ್‌ ಲೈಟ್ ಚಿತ್ರಗಳಿಂದ ಬಯಲಾಗಿದೆ.

ಬೆಂಗಳೂರಿನ ಪೀಣ್ಯ- ಜಾಲಹಳ್ಳಿ ಯಲ್ಲಿರುವ ಎಚ್‌ಎಂಟಿಯ ವಶದಲ್ಲಿರುವ ಅರಣ್ಯದ ಮರಗಳನ್ನು ಕಡಿದು ಟಾಕ್ಸಿಕ್ ಸಿನಿಮಾ ತಂಡ ಸೆಟ್ ನಿರ್ಮಿಸಿ ಶೂಟಿಂಗ್ ನಡೆಸುತ್ತಿತ್ತು. ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ಮುಂದಾಗಿದೆ.

ಇದನ್ನೂ ಓದಿ: 🔴ಬೆಳ್ತಂಗಡಿ: ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ ಹಾಗೂ

ಈಶ್ವರ್ ಖಂಡ್ರೆ ಕೇಸ್ ದಾಖಲಿಸಲು ಆದೇಶ..!
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅರಣ್ಯ ಸಚಿವ ಈಶ್ವರ್‌ ಬಿ ಖಂಡ್ರೆ. ” ಎಚ್ ಎಂ ಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ‘ಟಾಕ್ಸಿಕ್’ ಎಂಬ ಚಲನಚಿತ್ರದ ಚಿತ್ರೀಕರಣಕ್ಕಾಗಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿದು ಹಾನಿಗೊಳಿಸಿರುವ ವಿಚಾರ ಗಂಭೀರ ಚಿಂತೆ ಮೂಡಿಸಿದೆ ” ಎಂದಿದ್ದಾರೆ.

ಸ್ಯಾಟ್‌ ಲೈಟ್ ಚಿತ್ರಗಳಿಂದ ಈ ಅಕ್ರಮ ಕೃತ್ಯವು ಸ್ಪಷ್ಟವಾಗಿ ಕಾಣುತ್ತಿದ್ದು, ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಈ ಅಕ್ರಮ ಕೃತ್ಯಕ್ಕೆ ಹೊಣೆಗಾರರ ವಿರುದ್ಧ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಖಂಡ್ರೆ ಹೇಳಿದ್ದಾರೆ.

ನಮ್ಮ ಅರಣ್ಯ ಮತ್ತು ಪರಿಸರದ ರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ. ಅರಣ್ಯ ಭೂಮಿಯಲ್ಲಿ ಅಕ್ರಮ ಕೃತ್ಯಗಳು ಕಂಡುಬಂದಲ್ಲಿ, ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಾನು ಬದ್ಧನಾಗಿದ್ದೇನೆ ಎಂದು ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *