ಇಂದೋರ್:(ಅ.31) ಮುಂಜಾನೆಯೇ ಹುಡುಗಿಯರ ಜೀವಕ್ಕೆ ಕಾರು ಚಾಲಕ ಆಪತ್ತು ತಂದ ಘಟನೆ ವರದಿಯಾಗಿದೆ. ಅಪ್ರಾಪ್ತ ಬಾಲಕ ಕಾರು ಚಲಾಯಿಸಿ ಇಬ್ಬರ ಪ್ರಾಣಕ್ಕೆ ಕುತ್ತು ತಂದಿದ್ದಾನೆ. ಇಂತಹದೊಂದು ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ಇದನ್ನೂ ಓದಿ: ⭕ಬೆಂಗಳೂರು: ಇನ್ಮುಂದೆ ಮಹಿಳೆಯರು ಬಸ್ ಟಿಕೆಟ್ ಗೆ ಹಣ ನೀಡಬೇಕಾ?!
ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರಿಗೆ ಕಾರಿನಿಂದ ಡಿಕ್ಕಿ ಹೊಡೆದ 17 ವರ್ಷದ ಬಾಲಕ ಕಾರು ಅಪಘಾತವಾಗುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದಾನೆ.
ಕಾರಿನಡಿ ಸಿಲುಕಿದ ಬಾಲಕಿಯರು ಸಹಾಯಕ್ಕಾಗಿ ಕಿರುಚಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಕಿರಿದಾದ ರಸ್ತೆಯೊಂದರಲ್ಲಿ ಮನೆಯ ಹೊರಗೆ ರಂಗೋಲಿ ಹಾಕುತ್ತಿದ್ದ ಇಬ್ಬರು ಹುಡುಗಿಯರಿಗೆ ಡಿಕ್ಕಿ ಹೊಡೆದ ಕಾರು ಪಕ್ಕದ ಅಂಗಡಿಯನ್ನು ಕೂಡ ಧ್ವಂಸ ಮಾಡಿದೆ.
ಅಪಘಾತದಿಂದ ಗಾಯಗೊಂಡ ಯುವತಿಯರನ್ನು ಪ್ರಿಯಾಂಶಿ ಪ್ರಜಾಪತಿ ಹಾಗೂ ನವ್ಯಾ ಪ್ರಜಾಪತಿ ಎಂದು ಗುರುತಿಸಲಾಗಿದೆ. ಗಾಯಾಳು ಹುಡುಗಿಯರ ಸ್ಥಿತಿ ಚಿಂತಾಜನಕವಾಗಿದೆ.
ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದ ಅಪ್ರಾಪ್ತ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾಗಿ ಪೊಲೀಸ್ ಮೂಲಗಳು ತಿಳಿಸಿದೆ.