ಬೆಂಗಳೂರು: (ನ.4) ನಟ ಜಗ್ಗೇಶ್ ಹಾಗೂ ನಿರ್ದೇಶಕ ಗುರುಪ್ರಸಾದ್ ಅವರು ಜೊತೆಯಾಗಿ ‘ಮಠ’, ‘ಎದ್ದೇಳು ಮಂಜುನಾಥ’, ‘ರಂಗನಾಯಕ’ ಸಿನಿಮಾಗಳನ್ನು ಮಾಡಿದ್ದರು. ಆದರೆ ಅವರಿಬ್ಬರ ನಡುವೆ ಮನಸ್ತಾಪ ಇತ್ತು. ಭಾನುವಾರ (ನವೆಂಬರ್ 3) ಗುರುಪ್ರಸಾದ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಆಯಿತು.
ಇದನ್ನೂ ಓದಿ :💥ದೆಹಲಿ : 70 ವರ್ಷ ದಾಟಿದ ಹಿರಿಯರಿಗೆ ಪ್ರಧಾನಿಯವರಿಂದ ಗುಡ್ ನ್ಯೂಸ್!!
ಕೂಡಲೇ ಜಗ್ಗೇಶ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಆದರೆ ಅವರು ಗುರುಪ್ರಸಾದ್ ನಿಧನದ ಬಳಿಕ ಕೆಳಮಟ್ಟದಲ್ಲಿ ಟೀಕೆ ಮಾಡಿದ್ದು ಸರಿಯಲ್ಲ ಎಂದು ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅವರು ಹೇಳಿದ್ದಾರೆ. ಈ ಮನಸ್ಥಿತಿಯನ್ನು ವಿಕೃತಿ ಎಂದು ಜಗದೀಶ್ ಹೇಳಿದ್ದಾರೆ.
ಫಾಲೋಯಿಂಗ್ ಜಾಸ್ತಿ ಆಗಿದೆ. ಅನೇಕ ವಿಚಾರಗಳ ಬಗ್ಗೆ ಅವರು ಸೋಶಿಯಲ್ ಮೀಡಿಯಾ ಖಾತೆಯ ಮೂಲಕ ಪ್ರತಿಕ್ರಿಯಿಸುತ್ತಾರೆ. ಈಗ ಗುರುಪ್ರಸಾದ್ ಸಾವಿನ ನಂತರ ಜಗ್ಗೇಶ್ ಹೇಳಿದ ಮಾತುಗಳನ್ನು ಜಗದೀಶ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
“ವಾವ್ ಜಗ್ಗೇಶ್.. ಸತ್ತ ವ್ಯಕ್ತಿ ಬಗ್ಗೆ ಎಂತಹಾ ವಿಶ್ಲೇಷಕ ಕೃತಿಯನ್ನು ಕೊಟ್ಟೆ. ಸಾವಿನಲ್ಲೂ ವಿಕೃತಿ ಕಾಣಬಹುದಾಗಿದೆ ಎಂಬುದನ್ನು ನಿನ್ನಿಂದ ಕಲಿಯಬೇಕಾಗಿದೆ. ಸಂಸ್ಕೃತಿ ಅದೇ ರೀತಿ ಇದೆಯೋ ಅಥವಾ ನಿನ್ನ ಮನಸ್ಥಿತಿಯೇ ಅಷ್ಟು ವಿಕೃತವಾಗಿದೆಯೋ ನನಗೆ ಗೊತ್ತಿಲ್ಲ. ಗುರುಪ್ರಸಾದ್ಗೆ ಕೆರೆತ ಇತ್ತಾ? ಕೀವು, ರಕ್ತ ಬರುತ್ತಿತ್ತಾ? ಎಂಥ ಮನುಷ್ಯ ನೀನು? ಯಾವ ರೀತಿಯಲ್ಲಿ ಮನುಷ್ಯ ಎನ್ನಬೇಕೋ ತಿಳಿಯುತ್ತಿಲ್ಲ” ಎಂದು ಜಗದೀಶ್ ಹೇಳಿದ್ದಾರೆ.
“ನಿನ್ನನ್ನು ನೀನು ರಾಘವೇಂದ್ರರ ಭಕ್ತ ಅಂತ ಹೇಳ್ತೀಯ. ರಾಘವೇಂದ್ರನ ಭಕ್ತನಾಗಿ, ನಿನಗೆ ಲೈಫ್ ಕೊಟ್ಟ ಡೈರೆಕ್ಟರ್ ಬಗ್ಗೆ ಈ ರೀತಿ ಮಾತಾಡ್ತೀಯ. ‘ಮಠ’ ಸಿನಿಮಾದಲ್ಲಿ ಗುರುಪ್ರಸಾದ್ ನಿನಗೆ ಲೈಫ್ ಕೊಟ್ಟ. ಜಗ್ಗೇಶ್ ಯಾರು ಅಂತ ಇಡೀ ಕರ್ನಾಟಕ ಮರೆತುಹೋಗಿತ್ತು. ಸಾವಿನಲ್ಲೂ ವಿಕೃತಿ ಕಾಣುವಂತಹ ವ್ಯಕ್ತಿ ನೀನು ಎಂಬುದು ನನಗೆ ಗೊತ್ತಿರಲಿಲ್ಲ” ಎಂದು ಜಗ್ಗೇಶ್ಗೆ ಜಗದೀಶ್ ಚಾಟಿ ಬೀಸಿದ್ದಾರೆ.
https://www.facebook.com/share/v/1874u9KLYQ
“ನೀನು ಮರೆತು ಹೋಗಿದ್ದೀಯ. 25 ವರ್ಷದ ಹಿಂದೆ ಯಾವನಿಗೋ 5 ಲಕ್ಷ ರೂಪಾಯಿ ಕೊಡಬೇಕು ಅಂತ ಹನುಮಂತೇ ಗೌಡರನ್ನು ಕರೆದುಕೊಂಡು ನಮ್ಮ ಆಫೀಸ್ಗೆ ಬಂದೆ. ಆವತ್ತು ನಾನು ನಿನ್ನ ರೈಟ್ ಹೇಳು ಅಂದೆ. ನೀನೇನು ರೌಡಿನಾ? ಆವತ್ತೇ ನಿನ್ನ ಯೋಗ್ಯತೆ ಗೊತ್ತಾಯಿತು.
ಗುರುಪ್ರಸಾದ್ ಬಗ್ಗೆ ನೀನು ಆಡಿದ ಮಾತು ನನಗಂತೂ ಜೀರ್ಣ ಆಗಿಲ್ಲ. ನಿನ್ನ ಮತ್ತು ಅಶೋಕನ ಡೀಲ್ ನನಗೆ ಚೆನ್ನಾಗಿ ಗೊತ್ತು. ಕಾಲಾಯ ತಸ್ಮೈ ನಮಃ. ಇಂದು ಗುರುಪ್ರಸಾದ್ ಮನೆಯ ಬಾಗಿಲಲ್ಲಿ ಇದ್ದ ಯಮ ನಾಳೆ ಯಾರ ಮನೆಗೆ ಬೇಕಾದರೂ ಬರಬಹುದು. ಕಾದು ನೋಡೋಣ” ಎಂದು ಜಗದೀಶ್ ಹೇಳಿದ್ದಾರೆ.