Sat. Apr 19th, 2025

Kukke Subramanya: ಪೂಜೆಗೆಂದು ಬಂದಿದ್ದ ವಿದ್ಯಾರ್ಥಿನಿಯ ಎದೆಗೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ ಕಾಮುಕ – ಪ್ರಶ್ನಿಸಿದ್ದಕ್ಕೆ ಆತ ಮಾಡಿದ್ದೇನು ಗೊತ್ತಾ!?

ಕುಕ್ಕೆ ಸುಬ್ರಹ್ಮಣ್ಯ:(ನ.5) ಕುಕ್ಕೆ ಸುಬ್ರಹ್ಮಣ್ಯದಲ್ಲಿ ದೇವರ ದರ್ಶನಕ್ಕೆ ಬಂದಿದ್ದಂತಹ ಕಾಲೇಜು ವಿದ್ಯಾರ್ಥಿನಿಯೊಂದಿಗೆ ವ್ಯಕ್ತಿಯೋರ್ವನು ಅನುಚಿತ ವರ್ತನೆ ತೋರಿ ಅಸಭ್ಯ ಮೆರೆದಿದ್ದಾನೆ. ಇದೀಗ ಆ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.

ಇದನ್ನೂ ಓದಿ: ⭕ಕೊಕ್ಕಡ: ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು..!!!

ಸ್ಥಳೀಯ ಕಾಲೇಜು ವಿದ್ಯಾರ್ಥಿಯೊಬ್ಬಳು ದೀಪಾವಳಿ ಹಬ್ಬ ಪ್ರಯುಕ್ತ ತನ್ನ ಮನೆಗೆ ಬಂದಿದ್ದರು. ನ.2 ರಂದು ರಾತ್ರಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುತ್ತಿದ್ದ ಪೂಜೆಯಲ್ಲಿ ಭಾಗವಹಿಸಿ ಮನೆಯವರ ಜೊತೆ ಭೋಜನಾ ಶಾಲೆಯತ್ತ ತೆರಳಿದ್ದರು. ಈ ವೇಳೆ ಆರೋಪಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ.

ಯುವತಿ ಊಟಕ್ಕೆ ಕುಳಿತುಕೊಳ್ಳಲು ಗೋಡೆ ಬದಿ ನಿಂತು ಕಾಯುತ್ತಿರುವಾಗ ಅಲ್ಲೇ ಪಕ್ಕದಲ್ಲಿ ಓಡಾಟ ಮಾಡುತ್ತಿದ್ದ ಆರೋಪಿ ಯುವತಿಯ ಎದೆ ಭಾಗಕ್ಕೆ ಕೈ ಹಾಕಿ ದೈಹಿಕ ಹಿಂಸೆ ನೀಡಿರುವುದಾಗಿ ಆರೋಪಿಸಲಾಗಿದೆ. ಅಲ್ಲದೆ ಪ್ರಶ್ನಿಸಿದಕ್ಕೆ ಆರೋಪಿ ಅವಾಚ್ಯ ಶಬ್ದ ಗಳಿಂದ ಬೈದಿರುವುದಾಗಿ ದೂರಲಾಗಿದೆ.

ಈತ ಸುಬ್ರಹ್ಮಣ್ಯದಲ್ಲೇ ಜೆರಾಕ್ಸ್ ಅಂಗಡಿಯೊಂದನ್ನು ಇಟ್ಟುಕೊಂಡಿದ್ದು ದೇಗುಲ ಪರಿಸರದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ. ಯುವತಿಯ ದೂರನ್ನು ಪರಿಶೀಲಿಸಿ ಸುಬ್ರಹ್ಮಣ್ಯ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಕಾಯ್ದೆಯಡಿ ( BNS ACT -75,352 ಕಾಲಂ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *