ಅಮೆರಿಕ:(ನ.6) ಅಮೆರಿಕದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ್ದಾರೆ. ಕಮಲಾ ಹ್ಯಾರಿಸ್ ಹಾಗೂ ಟ್ರಂಪ್ ನಡುವೆ ಭಾರಿ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಆದರೆ ಅಂತಿಮವಾಗಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ವಿರುದ್ದ ಟ್ರಂಪ್ ಗೆಲುವು ಸಾಧಿಸಿದ್ದಾರೆ.
ಇದನ್ನೂ ಓದಿ: ⭕ಮುಂಬೈ: ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಲು ವಯಾಗ್ರ ತೆಗೆದುಕೊಂಡ ವ್ಯಕ್ತಿ
ಅಮೆರಿಕ(ಯುಇಎಸ್)ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪ್ರಚಂಡ ಮುನ್ನಡೆ ಸಾಧಿಸಿರುವ ಬೆನ್ನಲ್ಲಿ ಇದು ಅಮೆರಿಕನ್ನರಿಗೆ ಅದ್ಭುತ ಗೆಲುವು ನಾವು ಇತಿಹಾಸ ನಿರ್ಮಿಸಿದ್ದೇವೆ ಎಂದು ಟ್ರಂಪ್ ಗೆಲುವನ್ನು ಘೋಷಿಸಿಕೊಂಡಿದ್ದಾರೆ.
ಫ್ಲೋರಿಡಾದ ಪಾಮ್ ಬೀಚ್ನಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಹಿಂದೆಂದೂ ಕಂಡಿರದ ರಾಜಕೀಯ ಗೆಲುವು. ನಾನು ಅಮೆರಿಕಾದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಈ ಗೆಲುವು “ಅಮೆರಿಕನ್ ಜನರಿಗೆ ಭವ್ಯವಾದ ಗೆಲುವು” ಎಂದು ಕರೆದರು.ನಾವು ಇತಿಹಾಸ ನಿರ್ಮಿಸಿದ್ದೇವೆ, ಇದು ಅಮೆರಿಕಕ್ಕೆ ಸುವರ್ಣ ಯುಗ.ಈ ವರ್ಷದ ಆರಂಭದಲ್ಲಿ ಹತ್ಯೆಯ ಯತ್ನದಿಂದ ಬದುಕುಳಿದ ಟ್ರಂಪ್, “ದೇವರು ಒಂದು ಕಾರಣಕ್ಕಾಗಿ ನನ್ನ ಜೀವವನ್ನು ಉಳಿಸಿದ್ದಾನೆ ಎಂದು ಹೇಳಿದರು.
ಇದು ಹಿಂದೆಂದೂ ಯಾರೂ ನೋಡದ ಚಳುವಳಿಯಾಗಿದೆ. ನಾವು ನಮ್ಮ ಗಡಿಗಳನ್ನು ನಮ್ಮ ದೇಶದ ಎಲ್ಲಾ ಸಮಸ್ಯೆಯನ್ನು ಸರಿಪಡಿಸುತ್ತೇವೆ. ನಾವು ಇತಿಹಾಸವನ್ನು ನಿರ್ಮಿಸಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟ್ರಂಪ್ 25 ರಾಜ್ಯಗಳಲ್ಲಿ ಮತ್ತು ಕಮಲಾ ಹ್ಯಾರಿಸ್ 16 ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ 270 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಮಲಾ ಹ್ಯಾರಿಸ್ 214 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಗೆಲುವಿಗೆ 270 ಸ್ಥಾನಗಳಲ್ಲಿ ಟ್ರಂಪ್ ಮುನ್ನಡೆ ಸಾಧಿಸಿದ್ದಾರೆ.
ಡೋನಾಲ್ಡ್ ಟ್ರಂಪ್ ಗೆಲುವು ಸಾಧಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಟ್ರಂಪ್ ಜೊತೆಗಿನ ಫೋಟೋ ಹಂಚಿಕೊಂಡಿರುವ ಮೋದಿ, ಭಾರತ ಹಾಗೂ ಅಮೆರಿಕ ದ್ವಿಪಕ್ಷೀಯ ಸಂಬಂಧ, ವ್ಯಾಪಾರ ವಹಿವಾಟು ಮತ್ತಷ್ಟು ಉತ್ತಮಪಡಿಸಲು ಜಂಟಿಯಾಗಿ ಹೆಜ್ಜೆ ಹಾಕೋಣ ಎಂದಿದ್ದಾರೆ.
ನನ್ನ ಸ್ನೇಹಿತ ಡೊನಾಲ್ಡ್ ಟ್ರಂಪ್ ಅವರಿಗೆ ಐತಿಹಾಸಿಕ ಚುನಾವಣಾ ಗೆಲುವಿಗೆ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಹಿಂದಿನ ಅವಧಿಯ ಯಶಸ್ಸನ್ನು ಮುಂದುವರೆಸುತ್ತಿದ್ದೀರಿ. ಭಾರತ-ಅಮೆರಿಕ ವ್ಯಾಪಕ ಜಾಗತಿಕ ಮತ್ತು ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು, ನಮ್ಮ ಸಹಯೋಗವನ್ನು ನವೀಕರಿಸಲು ನಾನು ಎದುರು ನೋಡುತ್ತಿದ್ದೇನೆ. ನಮ್ಮ ಜನರ ಒಳಿತಿಗಾಗಿ ಒಟ್ಟಾಗಿ ಕೆಲಸ ಮಾಡೋಣ. ಜಾಗತಿಕ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಯನ್ನು ಉತ್ತೇಜಿಸೋಣ ಎಂದು ಮೋದಿ ಟ್ವೀಟ್ ಮೂಲಕ ಸಂದೇಶ ರವಾನಿಸಿದ್ದಾರೆ.