ಸುಳ್ಯ:(ನ.8) ಆಲೆಟ್ಟಿ ಗ್ರಾಮದ ಕಲ್ಲೆಂಬಿ ಎಂಬಲ್ಲಿ ವಿದ್ಯಾರ್ಥಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಇದನ್ನೂ ಓದಿ: ⭕Video Viral: ಮ್ಯಾಟ್ರಿಮೋನಿಯಲ್ ಸೈಟ್ ಅನ್ನು ನಂಬುವ ಮುನ್ನ ಎಚ್ಚರ
ಕಲ್ಲೆಂಬಿ ಸ್ಥಾನದ ಮನೆಯ ರಾಘವ ಬೆಳ್ಳಪ್ಪಾಡ ಎಂಬವರ ಪುತ್ರ ಮಿಥುನ್ ರಾಜ್ ( 26) ಎಂಬ ಯುವಕ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮನೆಯ ಅಡುಗೆ ಕೋಣೆಯ ಪಕ್ಕಾಸಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಮನೆಯವರು ಸುಳ್ಯಕ್ಕೆ ಮದುವೆಗೆಂದು ಹೋಗಿರುವ ಸಂದರ್ಭದಲ್ಲಿ ಕೃತ್ಯವೆಸಗಿಕೊಂಡಿದ್ದು, ಮನೆಯವರು ಹಿಂತಿರುಗಿ ಬಂದು ನೋಡಿದ ಮೇಲೆ ವಿಷಯ ತಿಳಿಯಿತು. ಸ್ಥಳಕ್ಕೆ ಸುಳ್ಯ ಪೋಲಿಸರು ಆಗಮಿಸಿ ಮಹಜರು ನಡೆಸಿ ಸರಕಾರಿ ಆಸ್ಪತ್ರೆಗೆ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಮೃತ ಪಟ್ಟ ಯುವಕ ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಯಾಗಿದ್ದು ತಾಯಿ ಶ್ರೀಮತಿ ಪ್ರಸನ್ನ ಕುಮಾರಿ, ಸಹೋದರ ಪ್ರಜೀತ್, ಸಹೋದರಿ ಮಾಯಶ್ರೀ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂಬುದು ತಿಳಿದು ಬಂದಿಲ್ಲ.