ಮುಂಡಾಜೆ:(ನ.9) ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಎಂಬಲ್ಲಿ ಕಾರು ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.
ಇದನ್ನೂ ಓದಿ: ⭕ಕೊಕ್ಕಡ: ಅನ್ಯ ಕೋಮಿನ ಜೋಡಿ ಸೌತಡ್ಕದಲ್ಲಿ ಪತ್ತೆ!
ಚಾರ್ಮಾಡಿ ಕಡೆಯಿಂದ ಉಜಿರೆಯತ್ತ ತೆರಳುತ್ತಿದ್ದ ದಾವಣಗೆರೆ ಮೂಲದ ಕಾರು ಹಾಗೂ ಉಜಿರೆಯಿಂದ ಮುಂಡಾಜೆ ಕಡೆ ತೆರಳುತ್ತಿದ್ದ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದು ಎರಡು ವಾಹನಗಳು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿವೆ.
ಘಟನೆಯಲ್ಲಿ ರಿಕ್ಷಾ ಚಾಲಕ ದಿಡುಪೆಯ ಸತೀಶ್( 39) ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.