ಪಡುಬಿದ್ರಿ:(ಜು.13) ಕಂಚಿನಡ್ಕದಲ್ಲಿ ತಂದೆಯೊಬ್ಬ ತನ್ನ ಮಗಳ ಖಾಸಗಿ ವೀಡಿಯೋಗಳನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಹರಿಬಿಟ್ಟಿದ್ದು ಈ ಕುರಿತು ಆತನ ಪತ್ನಿ ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ.
ಮಗಳು ತೀರ್ಥ ಹಳ್ಳಿಯ ಅವರ ಸಂಬಂಧಿ ತೌಸೀಫ್ ಎಂಬಾತನನ್ನು ಪ್ರೀತಿಸುತ್ತಿದ್ದು, ಇದು ಆಕೆಯ ತಂದೆಗೆ ಇಷ್ಟವಿರಲಿಲ್ಲ. ಆರೋಪಿಯು ತೌಸೀಫ್ನನ್ನು ಮನೆಗೆ ಕರೆಸಿ ಆತನ ಮೇಲೆ ಹಲ್ಲೆ ಮಾಡಿದ್ದು ,
ಇದನ್ನೂ ಓದಿ: https://uplustv.com/2024/07/13/padubidre-ಕಾಲಿಫ್ಲವರ್-ನಿಂದ
ಬಳಿಕ ಆತ ಹಾಗೂ ತನ್ನ ಮಗಳ ಫೋನ್ಗಳನ್ನು ಕಸಿದುಕೊಂಡು ಅದರಲ್ಲಿದ್ದ ವೀಡಿಯೋಗಳನ್ನು ತನ್ನ ಫೋನ್ಗೆ ವರ್ಗಾಯಿಸಿಕೊಂಡು ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ವಿವಿಧ ವಾಟ್ಸಾಪ್ ಗುಂಪುಗಳಿಗೆ ಆರೋಪಿಯು ಕಳುಹಿಸಿದ್ದಾನೆ.
ಇದಕ್ಕೆ ಪತ್ನಿ ಆಕ್ಷೇಪಿಸಿದಾಗ ಆಕೆಯ ಮೇಲೂ ಹಲ್ಲೆ ಮಾಡಿದ್ದಾನೆ.
ಬಳಿಕ ಪತ್ನಿಯು ಉಚ್ಚಿಲದ ತನ್ನ ತಾಯಿ ಮನೆಯಲ್ಲಿದ್ದಾಗ ಅಲ್ಲಿಗೂ ಹೋಗಿ ಗಲಾಟೆ ಮಾಡಿದ್ಧಾನೆ ಎಂದು ಪತ್ನಿಯು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.
ಈ ಘಟನೆಯ ನಂತರ ಆರೋಪಿಯ ಪುತ್ರಿಯು ಫಿನಾಯಿಲ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ಆಕೆಯನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.