Wed. Nov 20th, 2024

Kadaba: ವೃದ್ಧ ದಂಪತಿಗಳೆಂದು ನೋಡದೆ ಮನೆ ಕೆಡವಿದ ಅಧಿಕಾರಿಗಳು!! -ಬೀದಿಗೆ ಬಿದ್ದ ವೃದ್ಧ ದಂಪತಿ

ಕಡಬ:(ನ.14) ದಕ್ಷಿಣ ಕನ್ನಡದ ಕಡಬದಲ್ಲಿ ಸರ್ಕಾರಿ ಜಾಗದ ಮೇಲೆ ಕಟ್ಟಿದ್ದ ಜೋಪಡಿ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆದಿದ್ದು ಇದರಿಂದ ವೃದ್ಧ ದಂಪತಿ ಬೀದಿಗೆ ಬಿದ್ದಿದ್ದಾರೆ. ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಆರು ವರ್ಷಗಳಿಂದ ವಾಸವಿದ್ದ ವೃದ್ಧ ದಂಪತಿಗಳ ಮನೆಯೊಂದನ್ನು ಪೊಲೀಸ್ ನೇತೃತ್ವದಲ್ಲಿ ಅಧಿಕಾರಿಗಳು ನೆಲಸಮ ಮಾಡಿದ ಅಮಾನವೀಯ ಘಟನೆ ನಡೆದಿದೆ.

ಇದನ್ನೂ ಓದಿ: ⭕ಪಕ್ಷಿಕೆರೆ: ಕಾರ್ತಿಕ್ ಸಾಲದ ಸುಳಿಗೆ ಇಡೀ ಸಂಸಾರ ಬಲಿ!?

ಕಡಬದ ತಾಲೂಕಿನ ಕೌಕ್ರಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ರಾಧಮ್ಮ ಮತ್ತು ಮುತ್ತುಸ್ವಾಮಿ ದಂಪತಿ ಮನೆಯನ್ನು ಬುಧವಾರ ಏಕಾಏಕಿ ಧ್ವಂಸಗೊಳಿಸಲಾಗಿದೆ.

ಮೂಲತಃ ಚಿತ್ರದುರ್ಗ ಜಿಲ್ಲೆಯ ಹಟ್ಟಿ ನಿವಾಸಿಗಳಾಗಿದ್ದ ದಂಪತಿ ಕೂಲಿ ಕೆಲಸಕ್ಕಾಗಿ ಕರಾವಳಿಗೆ ಆಗಮಿಸಿ ಕಡಬ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಸರ್ಕಾರಿ ಜಾಗದ ಸರ್ವೇ ನಂಬರ್ 123/1ರಲ್ಲಿ ಕಳೆದ 6 ವರ್ಷಗಳಿಂದ ವಾಸಿಸುತ್ತಿದ್ದರು.

ದಂಪತಿಗೆ ಯಾವುದೇ ಪಿತ್ರಾರ್ಜಿತ ಆಸ್ತಿ ಇರಲಿಲ್ಲ. ಹೀಗಾಗಿ ಸರ್ಕಾರಿ ಜಾಗ 123/1ರಲ್ಲಿ ಕಾಪಿನಬಾಗಿಲು ಎಂಬಲ್ಲಿ ಸಣ್ಣ ಮನೆಕಟ್ಟಿಕೊಂಡಿದ್ದರು. ದಂಪತಿ ನಿತ್ಯ ಕೂಲಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು.

ವೃದ್ಧ ದಂಪತಿ ಸರ್ಕಾರಿ ಜಾಗದಲ್ಲಿ ಇದ್ದಾರೆ ಎಂಬ ಕಾರಣಕ್ಕಾಗಿ ಬೆಳ್ತಂಗಡಿ ತಾಲೂಕಿನ ಅಶೋಕ್ ಆಚಾರ್ಯ ಎಂಬವರು ಇವರನ್ನು ಒಕ್ಕಲೆಬ್ಬಿಸುವ ಸಲುವಾಗಿ ಹೈಕೋರ್ಟ್ ನಲ್ಲಿ ದಾವೆ ಹೂಡಿದ್ದಾರೆ. ಸರ್ಕಾರಿ ಜಾಗ ಖಾಲಿ ಮಾಡಲು ಹೈಕೋರ್ಟ್ ಸೂಚನೆ ನೀಡಿದ ಕಾರಣ ಕಳೆದ ಫೆಬ್ರವರಿಯಲ್ಲಿ ಮನೆ ತೆರವಿಗೆ ಅಧಿಕಾರಿಗಳು ಮುಂದಾಗಿದ್ದರು. ಆದರೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮನೆ ಕೆಡವದೆ ಪ್ರಕರಣ ತಣ್ಣಗಾಗಿತ್ತು.

ನ.13ರಂದು ದಿಢೀರ್ ಆಗಮಿಸಿದ ಅಧಿಕಾರಿಗಳು ಮನೆಯ ವಸ್ತುಗಳನ್ನು ಹೊರಗೆ ಎಸೆದು ಮನೆಯನ್ನು ಕೆಡವಿ ಹಾಕಿದ್ದಾರೆ. ವೃದ್ಧ ದಂಪತಿ ಕಣ್ಣೀರು ಹಾಕಿದರೂ ಕರಗದ ಅಧಿಕಾರಿಗಳು ಮನೆ ತೆರವುಗೊಳಿಸಿದ್ದಾರೆ. ಕಡಬ ತಹಶೀಲ್ದಾರ್ ಪ್ರಭಾಕರ ಖಜೂರೆ, ಉಪ್ಪಿನಂಗಡಿ ಪೊಲೀಸರ ನೇತೃತ್ವದಲ್ಲಿ ಮನೆ ತೆರವು ಮಾಡಲಾಗಿದೆ.

ಸರಕಾರದ ಕಾರ್ಯಾಚರಣೆ ವಿರೋಧಿಸಿ ವೃದ್ಧ ದಂಪತಿಗಳಿಂದ ಆಹೋರಾತ್ರಿ ಪ್ರತಿಭಟನೆ ಆರಂಭವಾಗಿದೆ. ಸ್ಥಳೀಯ ನೀತಿ ತಂಡದಿಂದ ದಂಪತಿಗೆ ಬೆಂಬಲ ದೊರಕಿದೆ. ಬುಲ್ಡೋಜರ್ ಕಾರ್ಯಾಚರಣೆ ನಡೆಸಿದ ಸ್ಥಳದಲ್ಲೇ ಪ್ರತಿಭಟನೆ ಆರಂಭವಾಗಿದ್ದು ಕಡಬ ತಹಶೀಲ್ದಾರ್ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ.

Leave a Reply

Your email address will not be published. Required fields are marked *