ಸೌಮ್ಯ ಅವರ ಪತಿ 1 ತಿಂಗಳ ಹಿಂದೆ ತೀರಿಕೊಂಡಿದ್ದರು. ಇದರಿಂದ ನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಿಯ್ಯಾರು ಚರ್ಚ್ ಬಳಿಯ ಅಂಗನವಾಡಿಯಲ್ಲಿ ಟೀಚರ್ ಆಗಿ ಕಳೆದ 15 ವರ್ಷಗಳಿಂದ ಸೌಮ್ಯ ಕರ್ತವ್ಯ ನಿರ್ವಹಿಸುತ್ತಿದ್ದರು.
ಪತಿಯ ನಿಧನದ ಬಳಿ ಸೌಮ್ಯ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ. ಇದೇ ನೋವಿನಲ್ಲಿ ಸೌಮ್ಯ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮೊದಲೇ ಸೌಮ್ಯ ಪತಿ ನಿಧನವಾಗಿದ್ದು, ಇದೀಗ ಸೌಮ್ಯ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದು, ತಾಯಿ ತಂದೆ ಇಲ್ಲದೇ ಸೌಮ್ಯ ಅವರ ಇಬ್ಬರು ಹೆಣ್ಣುಮಕ್ಕಳು ಅನಾಥರಾಗಿದ್ದಾರೆ.