ಬೆಳಾಲು (ನ.16): ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಜರುಗಿತು.
ಇದನ್ನೂ ಓದಿ: ⭕ಕಾರ್ಕಳ : ಪತಿಯ ಸಾವಿನಿಂದ ಮನನೊಂದು ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ!!
ಕ್ರೀಡಾಕೂಟವನ್ನು ಹಿರಿಯ ಯಕ್ಷಗಾನ ಕಲಾವಿದರಾದ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ರೀ ಪಿ. ಲಕ್ಷ್ಮಣಗೌಡ ಇವರು ಉದ್ಘಾಟಿಸಿ, ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಮೂಡುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಇವರು ಮಾತನಾಡಿ, ಕ್ರೀಡೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಾಯಕವಾಗಿದೆ ಎಂದು ತಿಳಿಸಿದರು. ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು ಧ್ವಜಾರೋಹಣ ನೆರವೇರಿಸಿದರು.
ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗಣೇಶ್ ಕನಿಕ್ಕಿಲ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕ್ರೀಡಾ ಮಂತ್ರಿ ಕುಮಾರಿ ತೃಪ್ತಿ ಇವರು ಪ್ರತಿಜ್ಞಾ ವಿಧಿ ಬೋಧಿಸಿದರು.
ದೈಹಿಕ ಶಿಕ್ಷಣ ಶಿಕ್ಷಕರಾದ ಶ್ರೀ ಕೃಷ್ಣಾನಂದ ಇವರು ಸ್ವಾಗತಿಸಿದರು. ಶಿಕ್ಷಕಿ ಕುಮಾರಿ ಶ್ರೇಯಾಶ್ರೀ ವಂದಿಸಿದರು. ಶಿಕ್ಷಕರಾದ ಶ್ರೀ ಸುಮನ್ ಯು. ಎಸ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.