ಮಂಗಳೂರು (ನ.17): ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ನಡೆದಿದೆ.
ಇದನ್ನೂ ಓದಿ: ⭕ಬೆಂಗಳೂರು: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ!!!
ಮೈಸೂರು ಮೂಲದ ಯುವತಿಯರು ಉಚ್ಚಿಲ ಬೀಚ್ ಬಳಿಯ ರೆಸಾರ್ಟ್ನ ಸ್ವಿಮ್ಮಿಂಗ್ ಫೂಲ್ನಲ್ಲಿ ಈಜಾಡುವಾಗ ಏಕಾಏಕಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಕೀರ್ತನಾ (21) ನಿಶಿತ ಎಂ.ಡಿ. (21), ಪಾರ್ವತಿ ಎಸ್ (20) ಎಂದು ಗುರುತಿಸಲಾಗಿದೆ.
ಮೈಸೂರು ಮೂಲದ ಯುವತಿಯರು ನವೆಂಬರ್ 16 ರಂದು ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದು, ಇಂದು (ನವೆಂಬರ್ 17) ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ನಲ್ಲಿ ಆಟವಾಡುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.
ಸ್ವಿಮ್ಮಿಂಗ್ ಫೂಲ್ ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿದ್ದು, ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದ್ದು, ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಉಳ್ಳಾಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.